ಕುಂದಾಪುರ: ಇದೊಂದು ಅಪರೂಪದ ಕಾರ್ಯಕ್ರಮ.ವಿದ್ಯಾರ್ಥಿ ಜೀವನದಲ್ಲೇ ಮಕ್ಕಳಿಗೆ ಮನೆ ,ಪರಿಸರ ಮತ್ತು ಊರ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ. ಕಾರ್ಯಕ್ರಮದ ಅಂಗವಾಗಿ ನೂರಾರು ವಿದ್ಯಾರ್ಥಿಗಳು ಖುದ್ದು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ಕೊಟ್ಟು ಸಾಕಷ್ಟು ವಿಷಯ ಕಲಿತುಕೊಂಡರು.
ಕುಂದಾಪುರ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕುಂದಾಪುರ ಸ.ಪ.ಪೂ.ಕಾಲೇಜು, ಪ್ರೌಢಶಾಲೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಭೇಟಿ ನೀಡಿ ಮಾಹಿತಿ ಪಡೆದರು. ಕುಂದಾಪುರ ನಗರದಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡನೆ ಮಾಡಿ, ಸಂಪನ್ಮೂಲವಾಗಿಯೂ ಪರಿವರ್ತನೆ ಮಾಡುವ ಬೃಹತ್ ಘಟಕವನ್ನು ವಿದ್ಯಾರ್ಥಿಗಳು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಘನತ್ಯಾಜ್ಯ ವಿಲೇವಾರಿ ,ಸಂಸ್ಕರಣೆ ,ಸ್ಚಚ್ಛತೆಯ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಒಟ್ಟಿನಲ್ಲಿ ನಗರ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮ ಇದಾಗಿತ್ತು.
ವರದಿ: ರಹೀಂ ಉಜಿರೆ, ಪಬ್ಲಿಕ್ ನೆಕ್ಸ್ಟ್ ಉಡುಪಿ
Kshetra Samachara
12/03/2022 08:40 pm