ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಪೊಲೀಸ್ ಠಾಣೆ ಗೆ ಸಂಪರ್ಕ ಕಲ್ಪಿಸುವ ರಸ್ತೆ ಹೊಂಡ ಮಯವಾಗಿ ಸಂಚಾರ ದುಸ್ತರವಾಗಿತ್ತು.
ದಿನಕ್ಕೆ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆ ಕೂಡಲೇ ದುರಸ್ತಿ ಪಡಿಸಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದರು.
ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಮುಖ್ಯಾಧಿಕಾರಿ ಚಂದ್ರಪೂಜಾರಿ ಹಾಗೂ ಸ್ಥಳೀಯ ಸದಸ್ಯ ಬಾಲಚಂದ್ರ ಕಾಮತ್ ನೇತೃತ್ವದಲ್ಲಿ. ಸುಮಾರು 2.5 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ನಡೆದಿದೆ.
ನ ಪಂ ಸದಸ್ಯ ಬಾಲಚಂದ್ರ ಕಾಮತ್ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ರಸ್ತೆ ತೀರ ಹದಗೆಟ್ಟಿತ್ತು ಸ್ಥಳೀಯರ ಹೋರಾಟದಿಂದ ಹಾಗೂ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಸದ್ಯ ದುರಸ್ತಿಯಾಗಿದೆ. ವರದಿ ಪ್ರಕಟಿಸಿದ ಪಬ್ಲಿಕ್ ನೆಕ್ಸ್ಟ್ ಗೆ ಧನ್ಯವಾದ ಎಂದಿದ್ದಾರೆ.
Kshetra Samachara
16/03/2022 01:41 pm