ಉಡುಪಿ ಜಿಲ್ಲೆಯ ಸಾಲಿಗ್ರಾಮ ಸಮೀಪದ ಸರ್ವಿಸ್ ರಸ್ತೆ ಕಾಮಗಾರಿ ಹತ್ತು ವರ್ಷಗಳ ನಂತರ ಆರಂಭಗೊಂಡಿದೆ. ಆದರೆ, ಯೋಜನೆಯ ಸ್ವರೂಪದಂತೆ ಮೀನು ಮಾರುಕಟ್ಟೆಯಿಂದ ಬಸ್ ನಿಲ್ದಾಣದ ವರೆಗೆ ಎರಡು ಕಡೆ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣವಾಗಬೇಕಿತ್ತು. ಇದೆ ಕಾರಣಕ್ಕಾಗಿ ಒತ್ತುವರಿ ಕಟ್ಟಡಗಳನ್ನು ತೆರವುಗೊಳಿಸಿ ಒಳಚರಂಡಿ ರಸ್ತೆ ನಿರ್ಮಾಣ ಕೆಲಸ ಪ್ರಾರಂಭಿಸಲಾಗಿತ್ತು. ಆದರೆ ಇದೀಗ ಕಾರಣವಿಲ್ಲದೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Kshetra Samachara
21/03/2022 04:49 pm