ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಳೆ ನೀರನ್ನು ಸಮರ್ಪಕ ರೀತಿಯಲ್ಲಿ ಸಂರಕ್ಷಣೆ ಮಾಡಿ: ಜಿಲ್ಲಾಧಿಕಾರಿ

ಉಡುಪಿ: ಮಾನವ ಸೇರಿದಂತೆ ಎಲ್ಲ ಜೀವ ಸಂಕುಲಕ್ಕೆ ಜೀವ ಜಲವಾಗಿರುವ ನೀರಿನ ಮಹತ್ವ ಮತ್ತು ಅದರ ಸಂರಕ್ಷಣೆ ಕುರಿತಂತೆ ಪ್ರತೀ ಮನೆ ಮನೆಯಲ್ಲಿ ಜಾಗೃತಿ ಮೂಡಬೇಕು. ಜಲ ಇದ್ದರೆ ಮಾತ್ರ ಜೀವ ಎಂಬ ಅರಿವು ಎಲ್ಲರಲ್ಲೂ ಮೂಡಬೇಕು. ಪ್ರತಿನಿತ್ಯವೂ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆಯ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತಿರಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ನಗರಸಭೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಉಡುಪಿ ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಮತ್ತು ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಮಳೆ ಬಿದ್ದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತಿದೆ. ಮಳೆ ನೀರನ್ನು ಸಮರ್ಪಕ ರೀತಿಯಲ್ಲಿ ಸಂರಕ್ಷಣೆ ಮಾಡುವ ಮೂಲಕ ಈ ಸಮಸ್ಯೆಯನ್ನು ತಡೆಯಬಹುದಾಗಿದ್ದು, ಕಟ್ಟಡ ಮತ್ತು ಗೃಹ ನಿರ್ಮಾಣಕ್ಕೆ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಮಳೆ ನೀರು ಕೊಯ್ಲು ಕಡ್ಡಾಯ ಎಂಬ ನಿಯಮಗಳಿದ್ದರೂ ಸಹ ಅವುಗಳ ಪಾಲನೆ ಆಗುತ್ತಿಲ್ಲ.

ಈ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಮತ್ತು ನಿಯಮಗಳ ಸಮರ್ಪಕ ಅನುಷ್ಠಾನವಾಗಿರುವ ಕುರಿತು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

Edited By : PublicNext Desk
Kshetra Samachara

Kshetra Samachara

22/03/2022 09:10 pm

Cinque Terre

5.79 K

Cinque Terre

1

ಸಂಬಂಧಿತ ಸುದ್ದಿ