ಉಡುಪಿ: ಮಾರ್ಚ್ 28 ಮತ್ತು 29 ರಂದು ನಡೆಯಲಿರುವ ಕಾರ್ಮಿಕರ ಅಖಿಲ ಭಾರತ ಮುಷ್ಕರವನ್ನು ಬೆಂಬಲಿಸಲು ಕಟ್ಟಡ ಕಾರ್ಮಿಕರ ಸಂಘ ನಿರ್ಧಾರ ಮಾಡಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿ,ಬೆಲೆ ಏರಿಕೆ ನಿಯಂತ್ರಣ,ಅಡುಗೆ ಅನಿಲ,ಪೆಟ್ರೋಲ್, ಡೀಸಲ್ ಬೆಲೆ ಇಳಿಸಲು, ಸಿಮೆಂಟ್, ಕಬ್ಬಿಣ ಇತ್ಯಾದಿಗಳ ಬೆಲೆ ನಿಯಂತ್ರಣಕ್ಕಾಗಿ ಒತ್ತಾಯಿಸಿ ಎರಡು ದಿನ ನಡೆಯುವ ಅಖಿಲ ಭಾರತ ಮುಷ್ಕರಕ್ಕೆ ಉಡುಪಿ ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
28 ರಂದು ಆಯಾ ಗ್ರಾಮ ಪಂಚಾಯತ್, ಪುರಸಭೆಗಳ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಲಿದ್ದೇವೆ.29 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಯಲಿದೆ. ಎರಡೂ ದಿನ ಜಿಲ್ಲೆಯ 13,000 ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸುತ್ತಾರೆ ಎಂದು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Kshetra Samachara
26/03/2022 05:58 pm