ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ನಾಳೆ ಪಾದಯಾತ್ರೆ

ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜನ್ನು ರಾಜ್ಯ ಸರಕಾರ ಕೂಡಲೇ ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿ ಕರಾವಳಿ ಯೂತ್ ಕ್ಲಬ್ ಸದಸ್ಯರು ಹಾಗೂ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಏ.1ರಂದು ಮೌನಪಾದಯಾತ್ರೆ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ಮಲ್ಪೆಯ ಗಾಂಧಿ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಮಲ್ಪೆ ಪೊಲೀಸ್ ಠಾಣೆ, ಮಲ್ಪೆ ಬಸ್ ನಿಲ್ದಾಣ, ಕಲ್ಯಾಡಿ, ಆದಿ ಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಉಡುಪಿ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕುಂಜಿಬೆಟ್ಟು, ಇಂದ್ರಾಳಿ, ಮಣಿಪಾಲ ಸಿಂಡಿಕೇಟ್ ಸರ್ಕಲ್ ಮೂಲಕ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಿದ್ದಾರೆ.

Edited By : PublicNext Desk
Kshetra Samachara

Kshetra Samachara

31/03/2022 11:36 am

Cinque Terre

6.44 K

Cinque Terre

0