ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಸ್ಮಾರಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರ ವಹಿಸಿಕೊಂಡಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಹೇಳಿದ್ದಾರೆ.
ಈ ಆಸ್ಪತ್ರೆಯನ್ನು ಖಾಸಗಿ ವ್ಯಕ್ತಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿರಲಿಲ್ಲ.ಈ ಹಿನ್ನೆಲೆಯಲ್ಲಿ ನಾಗರೀಕ ಸಮಿತಿ ಹೋರಾಟ ಕೈಗೊಂಡಿತ್ತು.ಇಲ್ಲಿನ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟದಲ್ಲಿದ್ದಾಗ ಸಮಿತಿ ಮೂಲಕ ವಿಭಿನ್ನ ಪ್ರತಿಭಟನೆಗಳನ್ನು ನಡೆಸಿ ಸರಕಾರದ ಗಮನ ಸೆಳೆಯಲಾಗಿತ್ತು.
ಇದೀಗ ಸರಕಾರ ಆಸ್ಪತ್ರೆಯ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದೆ.ಇಲ್ಲಿನ ಸಿಬಂದಿಗಳನ್ನು ಖಾಯಂಗೊಳಿಸಿ ಉತ್ತಮ ರೀತಿಯಲ್ಲಿ ಬಡವರ ಚಿಕಿತ್ಸೆ ಮುಂದುವರೆಸಿಕೊಂಡು ಹೋಗಬೇಕು ಎಂದು ನಿತ್ಯಾನಂದ ಆಗ್ರಹಿಸಿದ್ದಾರೆ.
Kshetra Samachara
31/03/2022 01:40 pm