ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಸ್ವಚ್ಛತೆ ಮೂಲಕ ತ್ಯಾಜ್ಯ ವಿಲೇವಾರಿಗೆ ನಾಗರಿಕರ ಸಹಕಾರ ಮುಖ್ಯ

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವತಿಯಿಂದ 14 ನೇ ಹಣಕಾಸು ಯೋಜನೆ ಹಾಗೂ ಸ್ವಚ್ಛ ಭಾರತ್ ಅನುದಾನದಲ್ಲಿ 33.5 ಲಕ್ಷ ಅನುದಾನದಲ್ಲಿ ಮನೆ ಮನೆಗಳಿಂದ ಕಸ ಸಂಗ್ರಹಿಸಿ ವಿಲೇವಾರಿಗೆ ಟೆಂಪೋ ಹಾಗೂ ಎರಡು ಮಿನಿ ಟಿಪ್ಪರ್ ಖರೀದಿಸಲಾಗಿದ್ದು ಶಾಸಕ ಉಮಾನಾಥ ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಅವರು ಮಾತನಾಡಿ, ಮುಲ್ಕಿ ನಗರ ಪಂಚಾಯಿತಿಯಲ್ಲಿ ನಗರದ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ರೂಪಿಸಲಾಗಿದ್ದು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ತ್ಯಾಜ್ಯ ವಿಲೇವಾರಿಗೆ ನಾಗರಿಕರ ಸಹಕಾರ ಅಗತ್ಯ ಎಂದರು.

ಈ ಸಂದರ್ಭ ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮುಖ್ಯಾಧಿಕಾರಿ ಚಂದ್ರಪೂಜಾರಿ,ಉಪಾಧ್ಯಕ್ಷರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆರೋಗ್ಯಾಧಿಕಾರಿ ರಾಜೇಶ್ ನಿರೂಪಿಸಿದರು.

Edited By :
Kshetra Samachara

Kshetra Samachara

14/04/2022 03:40 pm

Cinque Terre

13.36 K

Cinque Terre

0

ಸಂಬಂಧಿತ ಸುದ್ದಿ