ಉಡುಪಿ: ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಮತ್ತು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆಆರ್ಎಸ್ ಪಕ್ಷ ಮುಂದಾಗಿದ್ದು ಈ ಸಂಬಂಧ ಜನಚೈತನ್ಯ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಕೆಆರ್ಎಸ್ ಉಡುಪಿ ಜಿಲ್ಲಾ ಅಧ್ಯಕ್ಷ ಪ್ರಕಾಶ್ ರಾಜ್ ಕಾಡಬೆಟ್ಟು ಹೇಳಿದ್ದಾರೆ.
ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು ಇದೇ 24 ರಂದು ಜಿಲ್ಲೆಯ ತಂಡ ಯಾತ್ರೆಯಲ್ಲಿ ಭಾಗವಹಿಸಲಿದ್ದು ಪಕ್ಷ ಸಂಘಟನೆ ದೃಷ್ಟಿಯಿಂದ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಹೇಳಿದ್ದಾರೆ.
Kshetra Samachara
21/04/2022 06:19 pm