ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು : ಹೂಳೆತ್ತುವ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ!

ಬೈಂದೂರು :ತ್ರಾಸಿ ಗ್ರಾಮದ ಸೌಪರ್ಣಿಕಾ ನದಿ ಯಾಂತ್ರಿಕೃತ ಹೊಳೆತ್ತುವ ಕಾಮಗಾರಿ ಮತ್ತೆ ಪುನರಾರಂಭಗೊಂಡಿದ್ದು, ಇಲ್ಲಿನ ಗ್ರಾಮಸ್ಥರು ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ತ್ರಾಸಿ, ಮೊವಾಡಿ, ಹೊಸಾಡು ಗ್ರಾಮಸ್ಥರು ಪ್ರತಿಭಟನೆ ನೆಡೆಸಿದರು.

ಈ ಸಂದರ್ಭದ ಗುತ್ತೆಗೆದಾರರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಆಗಮಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಈ ಸಂದರ್ಭದಲ್ಲಿ ಗಣಿ ಇಲಾಖೆ ಅಧಿಕಾರಿ, ಬಿಜೆಪಿ ಬೈಂದೂರು ಮಂಡಲ ಮಾಜಿ ಅಧ್ಯಕ್ಷ ಪ್ರಣಯ್ ಕುಮಾರ್ ಶೆಟ್ಟಿ, ತಾ.ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಶ್ರೀಧರ್ ಬಡಾಕೆರೆ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

26/04/2022 10:23 am

Cinque Terre

14.9 K

Cinque Terre

0

ಸಂಬಂಧಿತ ಸುದ್ದಿ