ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕಸ ವಿಲೇವಾರಿ ಬಗ್ಗೆ ಶಾಸಕ ರಘುಪತಿ ಭಟ್ ಸಭೆ!

ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರವಾದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಹಂದಾಡಿ,ಹಾಗೂ ಚಾಂತರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣ ಕಸ ಹಾಗೂ ಹಸಿ ಕಸ ವಿಲೇವಾರಿ ಬಗ್ಗೆ ಶಾಸಕ ರಘುಪತಿ ಭಟ್ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳೊಂದಿಗೆ ಸಭೆ ನೆಡೆಸಿದರು.

ಸಭೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕ ನಿರ್ಮಾಣದ ಬಗ್ಗೆ ವಿಸ್ತ್ರತ ವರದಿಯೊಂದಿಗೆ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್, ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

27/04/2022 08:13 am

Cinque Terre

2.83 K

Cinque Terre

0

ಸಂಬಂಧಿತ ಸುದ್ದಿ