ಮಂಗಳೂರು: 1 ಕೋಟಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಶಾಸಕರ ವಿಶೇಷ ಮುತುವರ್ಜಿಯಲ್ಲಿ ಪಾಲಿಕೆ ವ್ಯಾಪ್ತಿಯ ಇಡ್ಯಾ ವಾರ್ಡ್ 7 ಸುರತ್ಕಲ್ ಶರತ್ ಬೇಕರಿ ಬಳಿಯಿಂದ ಗುಡ್ಲೆಕೊಪ್ಪ ತನಕ ರಸ್ತೆ ಕಾಂಕ್ರೀಟಿಕರಣಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಇಂದು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಉಪಮೇಯರ್ ಸುಮಂಗಲಾ ರಾವ್, ಪಾಲಿಕೆ ಸ್ಥಳೀಯ ಸದಸ್ಯೆ ನಯನಾ ಆರ್ ಕೋಟ್ಯಾನ್, ಕಾರ್ಪೋರೇಟರ್ಸ್ ಸರಿತಾ ಶಶಿಧರ್, ಶೋಭಾ ರಾಜೇಶ್, ಬಿಜೆಪಿ ಮಂಡಲ ಕಾರ್ಯದರ್ಶಿ ರಾಘವೇಂದ್ರ ಶೆಣೈ, ಕೋಶಾಧಿಕಾರಿ ಪುಷ್ಪರಾಜ್ ಮುಕ್ಕ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮಾಜಿ ಕಾರ್ಪೊರೇಟರ್ ಗುಣಶೇಖರ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಸುರೇಶ್ ಸಾಲ್ಯಾನ್, ಉದಯ ಆಳ್ವ ಉಪಸ್ಥಿತರಿದ್ದರು.
Kshetra Samachara
17/05/2022 04:46 pm