ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಹಾಗೂ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಂಪರ್ಕದ ಶಿಮಂತೂರು ಕುಬೇವೂರು ಪ್ರಧಾನ ರಸ್ತೆ ಅವ್ಯವಸ್ಥೆಗಳ ಆಗರವಾಗಿದೆ.
ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿಯ ದ್ವಾರದಿಂದ ಶಿಮಂತೂರು ದೇವಸ್ಥಾನವನ್ನು ಸಂಪರ್ಕಿಸುವ ಪ್ರಧಾನ ರಸ್ತೆ ಕೆಲಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಹೊಂಡ ಮಯವಾಗಿದೆ.
ರಸ್ತೆ ಬದಿಯ ಚರಂಡಿಯಲ್ಲಿ ಮರದ ಗೆಲ್ಲುಗಳು ಹಾಗೂ ಕಸಕಡ್ಡಿ ತುಂಬಿ, ರಸ್ತೆಯಲ್ಲೇ ಮಳೆ ನೀರು ಹರಿದು ಕೃತಕ ನೆರೆ ಉಂಟಾಗುತ್ತಿದೆ. ರಸ್ತೆಯ ಕೆಲಕಡೆ ದಾರಿದೀಪ ಅವ್ಯವಸ್ಥೆ ಕಾಡುತ್ತಿದೆ.
ಈ ಬಗ್ಗೆ ಅನೇಕ ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಇದುವರೆಗೂ ದುರಸ್ತಿಯಾಗಿಲ್ಲ, ಕೂಡಲೇ ಕಿಲ್ಪಾಡಿ ಹಾಗೂ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧಿಕಾರಿಗಳು ಮಳೆಗಾಲಕ್ಕೆ ಮೊದಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆ ಸಂಚಾರ ಸುಗಮಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Kshetra Samachara
17/05/2022 07:44 pm