ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳು ಅವ್ಯವಸ್ಥೆಯ ಆಗರವಾಗಿದೆ.
ಶಿಕ್ಷಣ ಸಂಸ್ಥೆ ಸುಸಜ್ಜಿತ ಆವರಣಗೋಡೆ, ಸಿಸಿ ಕ್ಯಾಮೆರಾ, ಕುಡಿಯುವ ನೀರಿನ ಅವ್ಯವಸ್ಥೆ, ಶೌಚಾಲಯ, ಶಿಕ್ಷಕರ ಕೊರತೆ ಕಾಣುತ್ತಿದೆ. ಈ ಬಗ್ಗೆ ಅನೇಕ ಬಾರಿ ಸ್ಥಳೀಯ ಶಾಸಕರು ಹಾಗೂ ನಗರ ಪಂಚಾಯತ್ ಸದಸ್ಯರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಪ್ರಯೋಜನವಾಗಿಲ್ಲ. ಶಾಲೆಯ ಸಮೀಪದಲ್ಲಿರುವ ಸಮುದಾಯ ಭವನದ ಶೌಚಾಲಯ ಕಿಡಿಗೇಡಿಗಳ ಪಾಲಾಗುತ್ತಿದ್ದು ಸಂಬಂಧಪಟ್ಟ ಇಲಾಖೆ ನಿದ್ರಿಸುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಬಗ್ಗೆ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನವೀನ್ ಪುತ್ರನ್ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ಮುಲ್ಕಿಯ ಹಲವಾರು ವರ್ಷಗಳ ಇತಿಹಾಸವಿರುವ ಕೆಎಸ್ ರಾವ್ ನಗರದ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಶಾಲೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಶಾಲೆ ಉಳಿಸಲು ಯಾವುದೇ ತ್ಯಾಗಕ್ಕೂ ಸಿದ್ಧ. ಕೂಡಲೇ ಶಾಸಕರು ಶಾಲೆಯನ್ನು ಮೇಲ್ದರ್ಜೆಗೇರಿಸುವ ಜೊತೆಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
Kshetra Samachara
18/05/2022 08:26 pm