ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಅತಿಕಾರಿಬೆಟ್ಟು: ʼಮೈಲೊಟ್ಟು ರಸ್ತೆʼ ಎಲ್ಲೆಲ್ಲೂ ಗುಂಡಿಗಳೇ ಗೋಚರ!; ಸಂಚಾರ ದುಸ್ತರ

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಪಂಜಿನಡ್ಕ ಮೈಲೊಟ್ಟು ಬಾನೊಟ್ಟು ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿದೆ. ಪಂಚಾಯತ್ ಎದುರಿನ ರಸ್ತೆ ಸಾಲು ಸಾಲು ಹೊಂಡಾಗುಂಡಿಗಳಿಂದಾಗಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಹದಗೆಟ್ಟು ಹೋಗಿದೆ.

ಇದೇ ರಸ್ತೆಯಲ್ಲಿ ಮುಂದಕ್ಕೆ ಹೋದರೆ ಕೊಂಕಣ ರೈಲ್ವೆ ಕ್ರಾಸಿಂಗ್ ಗೇಟ್ ಬಳಿ ಮಾರಣಾಂತಿಕ ಹೊಂಡಗಳು ಗೋಚರವಾಗುತ್ತವೆ! ಈ ಈ ರಸ್ತೆಯಲ್ಲಿ ಈಗಾಗಲೇ ಹಲವು ಅಪಘಾತಗಳು ಸಂಭವಿಸಿದೆ. ಈ ಬಗ್ಗೆ ಸ್ಥಳೀಯರಾದ ವಿನಾಯಕ್ ಮಾತನಾಡಿ, ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ದುರಸ್ತಿಯಾಗಿಲ್ಲ. ರಸ್ತೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ಕೃತಕ ನೆರೆ ಉಂಟಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ʼಪಬ್ಲಿಕ್ ನೆಕ್ಸ್ಟ್ʼ ಜೊತೆ ಮಾತನಾಡಿ, ರಸ್ತೆ ಅವ್ಯವಸ್ಥೆ ಬಗ್ಗೆ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಮನವಿ ಸಲ್ಲಿಸಿದ್ದು, ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರ ತಾಂತ್ರಿಕ ಅಡಚಣೆಗಳಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದರು.

ಮೈಲೊಟ್ಟು ರೈಲ್ವೆ ಗೇಟ್ ಹಾಗೂ ಕೊಲಕಾಡಿ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಕಾರ್ಯಗತವಾಗುವ ನಿರೀಕ್ಷೆ ಇದೆ. ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಬಗ್ಗೆ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

Edited By : Shivu K
Kshetra Samachara

Kshetra Samachara

22/05/2022 08:25 am

Cinque Terre

9.01 K

Cinque Terre

0

ಸಂಬಂಧಿತ ಸುದ್ದಿ