ಉಜಿರೆ: ಶೈಕ್ಷಣಿಕ ಕೇಂದ್ರವಾಗಿರುವ ಉಜಿರೆಯ ಪೆರ್ಲದಿಂದ ಮುಂಡತೋಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಹದೆಗೆಟ್ಟಿದ್ದು, ಸಂಚಾರಕ್ಕೆ ಯೋಗ್ಯವಾಗದ ಸ್ಥಿತಿ ತಲುಪಿದೆ. ಮಳೆಗಾಲ ಆರಂಭ ಆಗಿರುವುದರಿಂದ ಗುಂಡಿಗಳಲ್ಲಿ ನೀರು ತುಂಬಿ ಸಾರ್ವಜನಿಕರಿಗೆ ಸಮಸ್ಯೆನ್ನು ಉಂಟು ಮಾಡುತ್ತಿದೆ.
ಈ ರಸ್ತೆಯ ಶಾಲಾ ಕಾಲೇಜುಗಳಿಗೆ ಸಂರ್ಕಿಸುವ ಕೊಂಡಿಯಾಗಿದ್ದು, ಕಳೆದ 5 ವರ್ಷಗಳಿಂದ ರಸ್ತೆ ಸ್ಥಿತಿ ತೀರಾ ಹದಗೆಟ್ಟಿದೆ. ನಿತ್ಯ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುವ ರಸ್ತೆ ಇದಾಗಿದೆ. ರಸ್ತೆ ಹಾಳಾಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ಪಡುತ್ತಿದ್ದಾರೆ. ಇಷ್ಟಾದಾರೂ ಜನಪ್ರತಿನಿಧಿಗಳು ಕಣ್ಣು ಮುಚ್ಚಿಕೊಂಡು ಕುಳಿತ್ತಿದ್ದು ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸುವ ಮೂಲಕ ಸ್ಥಳೀಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
Kshetra Samachara
23/05/2022 12:14 pm