ಮುಲ್ಕಿ: ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯ ರಾಜ ರತ್ನಾಪುರ ಬಳಿಯ ಮೆನ್ನಬೆಟ್ಟು ಹಾಲಿನ ಸೊಸೈಟಿ ಎದುರು ಭಾಗದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ನಿಂತು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಪ್ರತಿ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು ಕೃತಕ ನೆರೆ ಭೀತಿ ಎದುರಾಗಿದೆ.
ಕಿನ್ನಿಗೊಳಿ ಉಲ್ಲಂಜೆ ಕಟೀಲು ಬಜಪೆ ಹೆದ್ದಾರಿಯಲ್ಲಿ ಅನೇಕ ಅಪಾಯಕಾರಿ ತಿರುವುಗಳಿದ್ದು ದಿನಂಪ್ರತಿ ಅನೇಕ ವಾಹನಗಳು ಸಂಚರಿಸುತ್ತಿದ್ದು ರಸ್ತೆಯಲ್ಲಿ ಹೋಗುವ ದ್ವಿಚಕ್ರ ವಾಹನಿಗರಿಗೆ ಹಾಗೂ ಪಾದಚಾರಿಗಳಿಗೆ ಪುಕ್ಕಟೆ ಕೆಸರು ನೀರು ಸಿಂಚನವಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಲಿನ ಸೊಸೈಟಿ ಎದುರು ಭಾಗದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
Kshetra Samachara
23/05/2022 09:22 pm