ಪಬ್ಲಿಕ್ ನೆಕ್ಸ್ಟ್ ವರದಿ ಫಲಶ್ರುತಿ
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಅಪಘಾತ ವಲಯ ಪ್ರದೇಶಗಳಾದ ಮುಲ್ಕಿ, ಹಳೆಯಂಗಡಿ, ಬಪ್ಪನಾಡು ಜಂಕ್ಷನ್ ಬಳಿ ತೆರವುಗೊಂಡಿದ್ದ ಬ್ಯಾರಿಕೇಡ್‌ಗಳು ಸೋಮವಾರ ಮತ್ತೆ ಅದೇ ಸ್ಥಳದಲ್ಲಿ ಪ್ರತ್ಯಕ್ಷವಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥಗೊಂಡ ಬಳಿಕ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ, ಸೂಕ್ತ ಸರ್ವಿಸ್ ರಸ್ತೆ ಇಲ್ಲದೆ ಅನೇಕ ಅಪಘಾತಗಳು ಸಂಭವಿಸಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಸಾರ್ವಜನಿಕರ ಆಗ್ರಹದ ಮೇರೆಗೆ ಹೆದ್ದಾರಿಯ ಅಪಘಾತ ವಲಯದ ಸ್ಥಳಗಳಲ್ಲಿ ವಾಹನಗಳ ವೇಗ ನಿಯಂತ್ರಿಸಲು ಪೊಲೀಸರಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.
ಕಳೆದ ಕೆಲ ದಿನಗಳ ಹಿಂದೆ ಟ್ರಾಫಿಕ್ ಪೊಲೀಸರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಇರಿಸಲಾದ ಬ್ಯಾರಿಕೇಡ್‌ಗಳನ್ನು ಏಕಾಏಕಿ ತೆರವುಗೊಳಿಸಿ ಹೆದ್ದಾರಿಯಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿದ್ದಲ್ಲದೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ದೂರು ಕೂಡ ಸಲ್ಲಿಸಿ ಹೋರಾಟದ ಮುನ್ಸೂಚನೆ ನೀಡಿದ್ದರು.
ಒಂದು ಮೂಲಗಳ ಪ್ರಕಾರ ನ್ಯಾಯಾಲಯದ ಆದೇಶದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗ ತಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಲು ನಿಷೇಧವಿದ್ದರೂ ಸಾರ್ವಜನಿಕರ ಆಗ್ರಹಕ್ಕೆ ಮಣಿದು ಟ್ರಾಫಿಕ್ ಪೊಲೀಸ್ ಇಲಾಖೆ ಅಪಘಾತವಲಯದಲ್ಲಿ ಪುನಃ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ದ್ವಿಚಕ್ರ ವಾಹನಗಳು ಪಾದಾಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ.
Kshetra Samachara
30/05/2022 08:40 pm