ಹೆಬ್ರಿ : ಹೆಬ್ರಿ ತಾಲೂಕು ರಚನೆ ಆಗಿ ನಾಡಾ ಕಚೇರಿ ಅಟಲ್ ಜನಸ್ನೇಹಿ ಕೇಂದ್ರ ಇಲ್ಲದೆ ಜನತೆಯ ಕಚೇರಿಯ ಕೆಲಸಗಳಿಗೆ ಸಮಸ್ಯೆಯಾಗಿತ್ತು. ಇದೀಗ ನೂತನ ತಾಲೂಕು ಕಚೇರಿಯ ಲೋಕಾರ್ಪಣೆಯ ವೇಳೆಗೆ ಅಟಲ್ ಜನಸ್ನೇಹಿ ಕೇಂದ್ರ ಆರಂಭವಾಗಿರುವುದು ಅತ್ಯಂತ ಖುಷಿ ನೀಡಿದೆ. ಜನರ ಸೇವೆಗೆ ನಾವು ಸದಾ ಸಿದ್ಧ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಹೆಬ್ರಿ ತಾಲೂಕು ಕಚೇರಿಯಲ್ಲಿ ನೂತನವಾಗಿ ಆರಂಭಗೊಂಡ ಅಟಲ್ ಜನಸ್ನೇಹಿ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡುತಿದ್ದರು.
ಹೆಬ್ರಿ ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಬಹುತೇಕ ಕೆಲಸಗಳು, ಮೂಲ ಸೌಕರ್ಯಗಳನ್ನು ಈಗಾಗಲೆ ಪೂರೈಸಲಾಗಿದೆ. ಮುಂದೆ ತಾಲೂಕು ಪಂಚಾಯಿತಿಗೆ ಸುಸಜ್ಜಿತ ಕಚೇರಿ ಕಟ್ಟಡ ನಿರ್ಮಾಣ ಸಹಿತ ಅಭಿವೃದ್ಧಿ ಕೆಲಸ ವನ್ನು ಅತೀ ಶೀಘ್ರವೇ ಮಾಡಲಾಗುತ್ತದೆ ಎಂದರು.
.
Kshetra Samachara
31/05/2022 05:24 pm