ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್, ಟೈಲ್ಸ್ ಫ್ಯಾಕ್ಟರಿ: ಸಿಎಂ

ಕಾರ್ಕಳ: ಯುವಕರಿಗೆ ಉದ್ಯೋಗ ಒದಗಿಸುವಂತಹ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ನ್ನು ಮಂಗಳೂರು ಸಮೀಪದಲ್ಲಿ ಇದೇ ವರ್ಷ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾರ್ಕಳ ತಾಲ್ಲೂಕಿನ ಎಣ್ಣಿಹೊಳೆಯ ಬಳಿ ಎಣ್ಣಿಹೊಳೆ ಏತ ನೀರಾವರಿ ಯೋಜನೆ ಯನ್ನು ಉದ್ಘಾಟಿಸಿ ಮಾತನಾಡಿದರು.

ಕರಾವಳಿ ಪ್ರದೇಶದಲ್ಲಿ ಗ್ರೀನ್ ಪವರ್ ಅಭಿವೃದ್ಧಿ, ಹಸಿರು ಇಂಧನ ಆಧಾರಿತ ಕೈಗಾರಿಕಾ ಹಬ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಶಿಲ್ಪಿಗಳು, ಮರದ ಕೆಲಸ ಮಾಡುವವರಿಗೆ ಕ್ಲಸ್ಟರ್ ನ್ನು ಸ್ಥಾಪಿಸಲು ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಈ ರೀತಿ ಸಮಗ್ರ, ಸಶಕ್ತ, ಸಮೃದ್ಧಿ ಕರ್ನಾಟಕ ಕಟ್ಟುವ ಬದ್ಧತೆ ಸರ್ಕಾರ ತೋರುತ್ತಿದೆ ಎಂದರು.

ಕಾರ್ಕಳದಲ್ಲಿ ಟೆಕ್ಸ್ ಟೈಲ್ ಪಾರ್ಕ್

ಕಾರ್ಕಳದಲ್ಲಿ ಪ್ರಾಚೀನ ಜೈನಬಸದಿಗಳು ಸೇರಿದಂತೆ ಇತರೆ ಪ್ರವಾಸಿ ತಾಣಗಳ ಟೂರಿಸಂ ಸರ್ಕೀಟ್ ನ್ನು ಅಭಿವೃದ್ದಿಗೊಳಿಸಲಾಗುವುದು. ಕರಾವಳಿ ಭಾಗದಲ್ಲಿ ಬೀಚ್ ಟೂರಿಸಂ ಹಾಗೂ ಯಾತ್ರಾ ಪ್ರವಾಸೋದ್ಯಮ ಈ ವರ್ಷ ಅಭಿವೃದ್ಧಿ ಮಾಡಲಾಗುವುದು. ಉದ್ಯೋಗ ಹೆಚ್ಚಳ, ಕೈಗಾರಿಕೆಗೆ ಹೆಚ್ಚಳಕ್ಕೆ ಒತ್ತು ನೀಡಲಾಗಿದ್ದು, ಕಾರ್ಕಳದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನ್ನು ನಿರ್ಮಿಸಲಾಗುವುದು ಎಂದರು.

Edited By : PublicNext Desk
Kshetra Samachara

Kshetra Samachara

01/06/2022 05:16 pm

Cinque Terre

2.52 K

Cinque Terre

0

ಸಂಬಂಧಿತ ಸುದ್ದಿ