ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ನಾರು ಬೆನಗಲ್ ರಸ್ತೆ ಅಭಿವೃದ್ಧಿಗೆ ಶಾಸಕರಾದ ಕೆ. ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೂ 2.50 ಕೋಟಿ ಮಂಜೂರಾಗಿದ್ದು, ಇಂದು ಶಾಸಕ ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ಉಪಾಧ್ಯಕ್ಷರಾದ ಕಿಟ್ಟಪ್ಪ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪಕ್ಷದ ಮುಖಂಡರಾದ ಧನಂಜಯ್ ಅಮೀನ್, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಕಮಲಾಕ್ಷ್ ಹೆಬ್ಬಾರ್ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್ ಸದಸ್ಯರುಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
25/06/2022 06:18 pm