ಉಡುಪಿ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಗುಂಡಿ ತೋಡುವ ಕಾಮಗಾರಿಗೆ ನಗರಸಭೆ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಮಂಗಳವಾರ ನಡೆದಿದೆ.
ಮಳೆಗಾಲದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಚರಂಡಿ ಗುಂಡಿ ತೋಡುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಯುತಿತ್ತು. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ಸಮಾಜಸೇವಕ ನಿತ್ಯಾನಂದ ಒಳಕಾಡು ತಂದಿದ್ದರು.
ತಕ್ಷಣ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದ್ದಾರೆ. ಭಾರೀ ಮಳೆ ಸಂದರ್ಭ ಅಪಾಯ ಸಂಭವಿಸುವ ಸಾಧ್ಯತೆಗಳಿರುವುದರಿಂದ ನಗರಸಭೆ ಈಗಾಗಲೇ ಹೊಂಡ ತೋಡುವ ಕಾಮಗಾರಿ ನಿಷೇಧಿಸಿದ್ದರೂ ನಗರದ ಅಲ್ಲಲ್ಲಿ ಹೊಂಡ ತೋಡುವ ಕಾಮಗಾರಿ ನಡೆಸಲಾಗುತ್ತಿದೆ ಎಂದು ಒಳಕಾಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
05/07/2022 06:00 pm