ಉಳ್ಳಾಲ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳನ್ನು ಸ್ವೀಕರಿಸದೇ ಇರುವಂತಹ ಮನೋಸ್ಥಿತಿ ಅದು ಸರ್ವಾಧಿಕಾರಕ್ಕೆ ಸಮವಾಗಿರುತ್ತದೆ. ಆಡಳಿತದ ಕೆಲವು ಸಂದರ್ಭಗಳಲ್ಲಿ ಟೀಕೆ, ಚರ್ಚೆಗಳು ಇದ್ದೇ ಇರುತ್ತವೆ. ಅವುಗಳನ್ನು ಎದುರಿಸಿ,ಸಮರ್ಪಕವಾಗಿ ಉತ್ತರಿಸಿ ಉತ್ತಮ ಸಮಾಜದ ನಿರ್ಮಾಣ ನಮ್ಮೆಲ್ಲರ ಕನಸಾಗಬೇಕು ಎಂದು ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರೂಸಾ ಅನುದಾನದಡಿ ನಿರ್ಮಿಸಲಾಗಿರುವ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ನೂತನ ಕಟ್ಟಡ ಹಾಗೂ ವಿಭಾಗದ ಉದ್ಘಾಟನೆ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ನ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಕರಾವಳಿಯಲ್ಲಿ ಅಗ್ನಿಪಥ ಸೈನಿಕ ತರಬೇತಿ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಯುವ ಸಮುದಾಯದಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಕಾರ್ಯ ಆಗಲಿದೆ ಎಂದು ಹೇಳಿದರು.
ಸಂಸದ ನಳಿನ್ ಕುಮಾರ್ ಕಟೀಲ್ ನೂತನ ಕಟ್ಟಡಗಳನ್ನು ಉದ್ಘಾಟಿಸಿದರೆ, ಶ್ರೀನಿವಾಸ ಪೂಜಾರಿ ವಸತಿ ನಿಲಯದ ಶಂಕುಸ್ಥಾಪನೆ ನೆರವೇರಿಸಿದರು. ವಿ.ವಿ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
Kshetra Samachara
08/07/2022 10:00 pm