ಬಜಪೆ: ಬಜಪೆಯಿಂದ ಮರವೂರು ಮೂಲಕ ಮಂಗಳೂರಿಗೆ ಸಾಗುವ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿ ವಾಹನಿಗರು ಪರದಾಡುವಂತಾಗಿದೆ.
ಕೆಲವು ತಿಂಗಳ ಹಿಂದೆಯೇ ಹೆದ್ದಾರಿಯ ಅಲ್ಲಲ್ಲಿ ಡಾಂಬರು ಕಿತ್ತು ಹೋಗಿ ಹೆದ್ದಾರಿ ಹೊಂಡಾಗುಂಡಿಮಯವಾಗಿದೆ. ಬಜಪೆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಹೆದ್ದಾರಿಯ ಮೂಲಕವೇ ಸಂಚರಿಸಬೇಕು. ಅಲ್ಲದೆ, ಕೆಲವು ದಿನಗಳಿಂದ ಮಳೆ ಅಬ್ಬರ ಕೂಡ ಜೋರಾಗಿದ್ದು, ಈ ದೊಡ್ಡ ಹೊಂಡಗಳಲ್ಲಿ ನೀರು ತುಂಬಿ ಅಲ್ಲಲ್ಲಿ ಚಿಕ್ಕ ಚಿಕ್ಕ ಕೆರೆಯೇ ನಿರ್ಮಾಣವಾಗಿದೆ. ಈ ಬಗ್ಗೆ ಹೆದ್ದಾರಿ ಇಲಾಖೆ ತುರ್ತು ದುರಸ್ತಿ ಕಾರ್ಯ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Kshetra Samachara
10/07/2022 09:51 pm