ಸುಳ್ಯ: ಮಳೆಗಾಲದಲ್ಲಿ ದ್ವೀಪವಾಗುವ ಉಪ್ಪುಕಳ ಪ್ರದೇಶವವನ್ನು ಸಂಪರ್ಕಿಸಲು ಉಪ್ಪುಕಳ ಹೊಳೆಗೆ ಮುಂದಿನ ಮಾರ್ಚ್‌ಗೆ ಮುಂಚಿತವಾಗಿ ಸರ್ವಋತು ಸೇತುವೆ ನಿರ್ಮಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಮಳೆಗಾಲದಲ್ಲಿ ಸಂಪರ್ಕ ಕಳೆದುಕೊಂಡು ಅತಂತ್ರವಾಗುವ ಉಪ್ಪುಕಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ಆರಂಭಿಸಿ ಮುಂದಿನ ಮಾರ್ಚ್‌ಗೆ ಮುಂಚಿತವಾಗಿ ಕಾಮಗಾರಿ ಪೂರ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು.
ಉಪ್ಪುಕಳ ಹಾಗೂ ಹರಿಹರ ಭಾಗದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಮುಳುಗಡೆ ಆಗುವ ಪದಕ ಸೇತುವೆ, ಗುಡ್ಡ ಕುಸಿದು ನಾಶವಾಗಿರುವ ಕಜ್ಜೋಡಿ ತೇಜಕುಮಾರ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಡ್ಡ ಕುಸಿದು ಮನೆ ನಾಶ ಆಗಿರುವುದಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಗ್ರಾ.ಪಂ.ಅಧ್ಯಕ್ಷ ಜಯಂತ ಬಾಳುಗೋಡು ಉಪಸ್ಥಿತರಿದ್ದರು.
Kshetra Samachara
14/07/2022 09:09 pm