ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಣ್ಣೆಗೆರೆ ಗ್ರಾಮಸ್ಥರು ಹಲವು ವರ್ಷದಿಂದ ಓಡಾಡಲು ಸರಿಯಾದ ರಸ್ತೆ ಇಲ್ಲದೆ ಪರದಾಡುತ್ತಿದ್ದಾರೆ.
ಈಗಂತೂ ಮಳೆಗಾಲದಲ್ಲಿ ಸಂಪೂರ್ಣ ಹಾಳಾದ ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ರಸ್ತೆಯನ್ನು ಆದಷ್ಟು ಶೀಘ್ರದಲ್ಲಿ ಅಭಿವೃದ್ಧಿಪಡಿಸಬೇಕೆಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಶೆಟ್ಟಿ, ಹಾಗೂ ಮಾಜಿ ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಇವಾಗಲೇ ಶಾಸಕರ ಮುತುವರ್ಜಿಯಲ್ಲಿ ಗುಜ್ಜಾಡಿ ಗ್ರಾಮದ ಮೇಲಂಡಿ ಮುಖ್ಯ ರಸ್ತೆ, ಗುಜ್ಜಾಡಿ ಗರಡಿಗೆ ಹೋಗುವ ರಸ್ತೆ, ಕಾರಂತರ ರಸ್ತೆ, ಬೆಣ್ಣೆಗೆರೆ ರಸ್ತೆಗಳಿಗೆ ಒಂದು ಕೋಟಿ ಇಪ್ಪತ್ತು ಲಕ್ಷ ಗ್ರಾಮೀಣ ಪಂಚಾಯತ್ ರಾಜ್ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿ ಇದ್ದು ಆದಷ್ಟು ಬೇಗ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದಾರೆ.
Kshetra Samachara
15/07/2022 09:48 am