ಉಡುಪಿ : ಜಿಲ್ಲೆಯಲ್ಲಿ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹಾಗೂ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡುವಂತೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ 18- 40 ವರ್ಷದೊಳಗಿನ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ಕುರಿತಂತೆ ಅಸಂಘಟಿತ ಕಾರ್ಮಿಕರ ವೃತ್ತಿವಾರು ಸಂಘಗಳೊಂದಿಗೆ ಸಮಾಲೋಚನೆ ನಡೆಸಿ. ನಿಗದಿತ ಸ್ಥಳ ಮತ್ತು ದಿನಾಂಕವನ್ನು ನಿಗದಿ ಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸಿ, ಎಲ್ಲಾ ಕಾರ್ಮಿಕರಿಗೆ ಈ ಯೋಜನೆಯ ಪ್ರಯೋಜನಗಳ ಕುರಿತು ಅರಿವು ಮೂಡಿಸಿ. ಸ್ಥಳದಲ್ಲೇ ನೋಂದಣಿ ಕಾರ್ಯವನ್ನು ಮಾಡುವ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಯೋಜನೆಗೆ ಸೇರ್ಪಡೆ ಮಾಡುವಂತೆ ತಿಳಿಸಿದರು.
Kshetra Samachara
15/07/2022 08:49 pm