ಪಬ್ಲಿಕ್ ನೆಕ್ಸ್ಟ್ ವರದಿ ಫಲಶ್ರುತಿ
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮಿಪದ ಕ್ಷೀರಸಾಗರದ ಹಾಲಿನ ಸೊಸೈಟಿ
ಬಳಿ ಕಳೆದ ಕೆಲವು ವರ್ಷಗಳಿಂದ ಹೆದ್ದಾರಿ ಸರ್ವಿಸ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಅರ್ಧಂಬರ್ಧ ಕಾಮಗಾರಿಯಿಂದ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ ಸ್ಥಳೀಯ 30 ಕುಟುಂಬಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ ಎಂದು ಆರೋಪಿಸಿ ಮುಲ್ಕಿ ನಪಂ ಸದಸ್ಯ ಯೋಗೀಶ್ ಕೋಟ್ಯಾನ್ ನೇತೃತ್ವದಲ್ಲಿ ಮುಲ್ಕಿ ನ.ಪಂ. ಗೆ ಹಾಗೂ ಹೆದ್ದಾರಿ ಇಲಾಖೆಗೆ ದೂರು ನೀಡಿದ್ದರು. ಅಲ್ಲದೆ, ಅವ್ಯವಸ್ಥೆ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಕೂಡ ವರದಿ ಮಾಡಿತ್ತು.
ಈ ಸಂದರ್ಭ ಕಾರ್ಯಪ್ರವೃತ್ತರಾದ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಕೂಡಲೇ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ಅದರಂತೆ ಗುತ್ತಿಗೆದಾರರು ಕಾಮಗಾರಿ ನಡೆಸಿದ್ದು, ತಾತ್ಕಾಲಿಕ ನೆಲೆಯಲ್ಲಿ ಸಂಪರ್ಕ ರಸ್ತೆ ಕಾಮಗಾರಿ ನಡೆಸಿ ಸಂಚಾರ ಮುಕ್ತಗೊಳಿಸಿದ್ದಾರೆ.
Kshetra Samachara
17/07/2022 03:55 pm