ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನಗಲ್ ಪಡುಬೆಟ್ಟು ಸಂಪರ್ಕ ರಸ್ತೆ ಅಭಿವೃದ್ಧಿಗೆ ಖಾಸಗಿ ಜಾಗದವರಿಂದ ತಡೆ ಉಂಟಾಗುತ್ತಿದ್ದು, ಸ್ಥಳೀಯರ ಬೇಡಿಕೆಯಂತೆ ಇಂದು ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಜಾಗದವರೊಂದಿಗೆ ಚರ್ಚಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಖಾಸಗಿ ಜಾಗದವರು ಶಾಸಕರ ಮನವಿಯಂತೆ ರಸ್ತೆಗೆ ಜಾಗವನ್ನು ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದರು. ಶ್ರೀಘ್ರದಲ್ಲಿ ರಸ್ತೆಯ ಅಂದಾಜು ಪಟ್ಟಿಯನ್ನು ತಯಾರಿಸುವಂತೆ ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ಪಂಚಾಯತ್ ಸದಸ್ಯರುಗಳಾದ ವಸಂತ್ ಸೇರ್ವೆಗಾರ್, ರಘುವೀರ್ ಕಿಣಿ, ಸುನಿಲ್, ಪ್ರಜ್ವತ್ ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರಾದ ಗುರುನಾಥ್ ಹಾದಿಮನೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹಿರಿಯಣ್ಣ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿಗಳಾದ ರಾಘವೇಂದ್ರ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
27/07/2022 08:41 pm