ಸುಳ್ಯ: ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ನೀರು ರಸ್ತೆಗೆ ನುಗ್ಗಿದ ಕಾರಣ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಸುಳ್ಯ ನಗರ ಸಮೀಪ ಅರಂಬೂರು, ಪಾಲಡ್ಕ ಭಾಗದಲ್ಲಿ ರಸ್ತೆಯ ಮೇಲೆ ನೀರು ತುಂಬಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ.
ಪಯಸ್ವಿನಿ ನದಿ ತುಂಬಿ ಹರಿದ ಕಾರಣ ನಿನ್ನೆ ರಾತ್ರಿಯಿಂದ ಹಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ನೀರು ನುಗ್ಗಿದ್ದು, ಸಂಚಾರಕ್ಕೆ ತಡೆ ಉಂಟಾಗಿದೆ. ರಾತ್ರಿಯಿಂದ ರಸ್ತೆ ಬಂದ್ ಆಗಿದ್ದು 6-7 ಗಂಟೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ನೀರಿನ ಮಟ್ಟ ಇಳಿಯದ ಕಾರಣ ವಾಹನ ಸಂಚಾರ ಪುನರಾರಂಭಿಸಲು ಸಾಧ್ಯವಾಗಿಲ್ಲ.
ಈ ಪ್ರದೇಶಗಳಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ಅವರನ್ನು ಸ್ಥಳಾಂತರ ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಅಲ್ಲದೇ ರಸ್ತೆಯ ಎರಡೂ ಬದಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದೆ.
Kshetra Samachara
03/08/2022 10:55 am