ಬೈಂದೂರು: ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ ಹಾಗೂ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರನ್ನು ಭೇಟಿ ಮಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ಜನವಸತಿ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.
ಆದ್ದರಿಂದ ನೆಟ್ವರ್ಕ್ ಸಂಪರ್ಕ ಸಾಧಿಸಲು ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ರೈಲ್ವೆ ವಿಭಾಗಕ್ಕೆ ಸಂಬಂಧಪಟ್ಟಂತೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಹಾಗೂ ದಾದರ್ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಲು ಕೇಂದ್ರ ಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.
Kshetra Samachara
03/08/2022 08:06 pm