ಮಂಗಳೂರು: ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನದ ಉಳಿದ ಕಾಮಗಾರಿಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 3.60 ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅಪೂರ್ಣ ಕಾಮಗಾರಿಗಳಿಗೆ ವೇಗ ನೀಡುವ ಕಾರ್ಯ ಆಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿಯ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆ.10ರಂದು ಬೆಳಗ್ಗೆ ತುಳುಭವನಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಯಾಗಿರುವ 3.60 ಕೋಟಿ ರೂ. ಹಣದಲ್ಲಿ ತುಳು ಭವನದಲ್ಲಿ ಭವ್ಯವಾದ ಸಭಾಂಗಣ, ವಸ್ತು ಪ್ರದರ್ಶನಾಲಯ, ವೇದಿಕೆ, ವಿದ್ಯುದ್ದೀಕರಣ, ಫಾಲ್ ಸೀಲಿಂಗ್, ಸೇರಿದಂತೆ ಬಾಕಿ ಉಳಿದ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಎಲ್ಲಾ ಕಾಮಗಾರಿಗಳು ನವೆಂಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆ ಬಳಿಕ ಕೊಂಕಣಿ ಅಕಾಡೆಮಿ ಭವನದ ಕಾಮಗಾರಿಗಳನ್ನು ವೀಕ್ಷಿಸಿದ ಅವರು ಕೊಂಕಣಿ ಅಕಾಡೆಮಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ 3ಕೋಟಿ ರೂ. ಬಿಡುಗಡೆಯಾಗಿದೆ. ಅಡಿಪಾಯ ಕಾಮಗಾರಿ ಮುಕ್ತಾಯವಾಗಿದೆ. ನೆಲಹಾಸನ್ನು ಸಮತಟ್ಟು ಮಾಡಲಾಗುತ್ತಿದೆ. ಭವನ ನಿರ್ಮಾಣದ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.
Kshetra Samachara
10/08/2022 10:11 pm