ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪದ್ಮನೂರಿನಲ್ಲಿ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿ ಅವ್ಯವಸ್ಥೆ ಸರಿಪಡಿಸಲು ಹೆದ್ದಾರಿ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿತ್ತು.
ಸದ್ಯ ನಮ್ಮ ವರದಿಯಿಂದ ಎಚ್ಚೆತ್ತು ಕಾರ್ಯಪ್ರವೃತ್ತರಾದ ಕಿನ್ನಿಗೋಳಿ ಸಮೀಪದ ಪದ್ಮನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರು ಶ್ರಮದಾನದ ಮೂಲಕ ಹೊಂಡಕ್ಕೆ ಕಾಂಕ್ರೀಟ್ ಹಾಕಿ ಸರಿಪಡಿಸಿದ್ದಾರೆ.
ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಡಿಸೋಜ, ಉಪಾಧ್ಯಕ್ಷ ಶೇಖರ್ ಪೂಜಾರಿ, ಚಂದ್ರಶೇಖರ,ಮ್ಯಾಕ್ಸಿಂ ಡಿಸೋಜ, ಕುಮಾರ್, ನಾರಾಯಣ್ ಹಾಗೂ ಸಮಿತಿಯ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.
Kshetra Samachara
20/08/2022 09:45 am