ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ:ವೃದ್ಧೆಯನ್ನು ಮರದ ಬಡಿಗೆಗೆ ಬಟ್ಟೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಾಟ

ಕಡಬ: ನಿತ್ಯ ಕಾಡಾನೆ ಅಲೆದಾಡುವ ಪ್ರದೇಶದಲ್ಲಿ, ರಸ್ತೆ ಸಮರ್ಪಕವಿಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾದ ವೃದ್ಧ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರ ಮುಖ್ಯರಸ್ತೆಗೆ, ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯದ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19ರಂದು ಈ ಘಟನೆ ನಡೆದಿದೆ. ಎಪ್ಪತ್ತು ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ನರಳುತ್ತಿದ್ದ ಹಿನ್ನೆಲೆಯಲ್ಲಿ ಎಂಜಿರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು. ಆದರೆ ರಸ್ತೆ ಇದ್ದರೂ ಅಭಿವೃದ್ದಿ ಕಾರಣ ಹಿನ್ನೆಲೆಯಲ್ಲಿ ವಾಹನ ಓಡಾಟ ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ ಎಂಜಿರ ಮುಖ್ಯ ರಸ್ತೆಗೆ ತಲುಪಿಸಿದ್ದಾರೆ.

ವೃದ್ಧ ಮಹಿಳೆಯನ್ನು ಹೊತ್ತುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಈ ಭಾಗದ ಜನರಿಗೆ ಎಂಜಿರ ಹತ್ತಿರದ ಪೇಟೆಯಾಗಿದೆ. ಇತ್ತೀಚೆಗೆ ಸುರಿದ ಮಹಾ ಮಳೆಗೆ ಈ ರಸ್ತೆ ಕೆಸರುಮಯವಾದ ಕಾರಣ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿಮೀಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿತ್ತು.

Edited By : Shivu K
Kshetra Samachara

Kshetra Samachara

20/08/2022 01:13 pm

Cinque Terre

5.35 K

Cinque Terre

1

ಸಂಬಂಧಿತ ಸುದ್ದಿ