ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ: ರಸ್ತೆ ಅವ್ಯವಸ್ಥೆ, ಸಂಚಾರ ದುಸ್ತರ

ಮುಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜಂಕ್ಷನ್ ಬಳಿ ಸುಮಾರು 20 ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಚ್ಚಾ ಮಣ್ಣಿನ ರಸ್ತೆ ಕಳೆದ ಸೂಕ್ತ ಡಾಂಬರೀಕರಣಕ್ಕೆ ಕಳೆದ ಹಲವಾರು ವರ್ಷಗಳಿಂದ ಬಕಪಕ್ಷಿಯಂತೆ ಕಾಯುತ್ತಿದೆ.

ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಕಿಲ್ಪಾಡಿ ಪಂಚಾಯಿತಿಗೆ ದೂರು ನೀಡಿದರೂ ಇದುವರೆಗೂ ದುರಸ್ತಿಗೊಂಡಿಲ್ಲ ಎನ್ನುತ್ತಾರೆ ಸ್ಥಳೀಯರು. ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಬಳಿ ಒಳಭಾಗಕ್ಕೆ ಕವಲೊಡೆಯುವ ಈ ರಸ್ತೆಗೆ ಹೆದ್ದಾರಿಯ ಚರಂಡಿಯಿಂದ ಮಳೆ ನೀರು ರಸ್ತೆಯಲ್ಲಿ ಹರಿದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಹೊಂಡ ಹಾಗೂ ಕೆಸರುಮಯವಾಗಿ ಸಂಚಾರ ದುಸ್ತರವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಿಲ್ಪಾಡಿ ಪಂಚಾಯಿತಿಗೆ ದೂರು ನೀಡಿದರೂ ಇದುವರೆಗೂ ಅನುಷ್ಠಾನಗೊಂಡಿಲ್ಲ. ರಸ್ತೆ ದುರಸ್ತಿ ಬಗ್ಗೆ ಪಂಚಾಯತ್ ಭರವಸೆ ಭರವಸೆಯಾಗಿಯೇ ಉಳಿದಿದ್ದಾರೆ ಎನ್ನುತ್ತಾರೆ ಸ್ಥಳೀಯರಾದ ಫಯಾಜ್.

Edited By : Shivu K
Kshetra Samachara

Kshetra Samachara

22/08/2022 02:25 pm

Cinque Terre

11.55 K

Cinque Terre

1

ಸಂಬಂಧಿತ ಸುದ್ದಿ