ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
PublicNext
30/08/2022 08:50 pm