ಉಡುಪಿ: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಗ್ನಿಪಥಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯರ ಹೆಸರಿನಲ್ಲಿ ಆರಂಭಿಸಲಾಗಿರುವ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಯು ಸೆ.5ರಂದು ಉಡುಪಿಯ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.
ಪ್ರತಿ ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿ ಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ಕಠಿಣ ವಾದ ನಾಲ್ಕು ತಿಂಗಳ ತರಬೇತಿ ಹೊಂದಿದ ಯುವಕರು ಬಹುತೇಕ ಮಂದಿ ಆಯ್ಕೆಯಾಗುವಂತಹ ಅವಕಾಶಗಳಿರುತ್ತದೆ.
ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಯಲ್ಲಿ ಕಲಿಯುತ್ತಿ ರುವ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸ ಲಾಗುತ್ತಿದ್ದು, ಎಲ್ಲಾ ಸಿದ್ಧತೆಗಳು ನಡೆದು ಪ್ರಥಮ ಹಂತದಲ್ಲಿ 60 ಜನ ಈಗಾಗಲೇ ಆಯ್ಕೆಯಾಗಿದ್ದಾರೆ. ಎರಡನೇ ಹಂತದಲ್ಲಿ ಎಲ್ಲಾ 100 ಅಭ್ಯರ್ಥಿಗಳು ಆಯ್ಕೆಯಾಗುವ ಅವಕಾಶಗಳು ಹೆಚ್ಚಿವೆ.
ಇಲಾಖೆಯ ಮೂಲಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪ್ರಥಮ ಹಂತ ದಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸುವುದಾಗಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Kshetra Samachara
05/09/2022 08:17 am