ಉಡುಪಿ: ನಗರಸಭೆಯ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆ ಕುರಿತು ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರಸಭೆಯ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಕಡತ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಶಾಸಕರ ಗಮನಕ್ಕೆ ತಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕರು ಸಭೆ ನಡೆಸಿ ಶೀಘ್ರದಲ್ಲಿ ಕಡೆತಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿ ಪಾರದರ್ಶಕವಾದ ಸೇವೆಯನ್ನು ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತರಾದ ಉದಯ್ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
06/09/2022 03:29 pm