ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕೋಟ ಪಂಚಾಯತ್ ರಾಜ್ಯದ ಇತರೆ ಪಂಚಾಯತ್ ಗಳಿಗೆ ಮಾದರಿ: ಸಚಿವ ಕೋಟ

ಬ್ರಹ್ಮಾವರ :ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಗ್ರಾಮದ ಜನರನ್ನು ಮತ್ತು ಅಲ್ಲಿಯ ಸಮಸ್ಯೆಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಿದಲ್ಲಿ ಗ್ರಾಮದ ಅಭಿವೃದ್ಧಿ ಸಾಧ್ಯವಿದೆ.ನಿಜವಾದ ಬಡವರಿಗೆ ಸೌಲಭ್ಯಗಳು ಸಿಗುವಂತಾಗಬೇಕು. ಕೋಟ ಗ್ರಾಮ ಪಂಚಾಯತ್ ಉಚಿತವಾಗಿ ಈ ಸೌಲಭ್ಯ ಗ್ರಾಮಸ್ಥರಿಗೆ ಒದಗಿಸುತ್ತಿರುವುದು ರಾಜ್ಯದ ಇತರೆ ಗ್ರಾಮ ಪಂಚಾಯಿತ್ ಗಳಿಗೆ ಮಾದರಿಯಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು

ಅವರು ಕೋಟ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೋಟ ಗ್ರಾಮ ಪಂಚಾಯತ್ ಹಾಗೂ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಎಜುಕೇರ್ ಗ್ರಾಮ ಒನ್ ಸೇವಾ ಕೇಂದ್ರದ ಸಹಯೋಗದೊಂದಿಗೆ ಹೊಸ ಆಯುಷ್ಮಾನ್ ಅಭಾ ಜಂಟಿ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಉಚಿತ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

12/09/2022 02:17 pm

Cinque Terre

1.91 K

Cinque Terre

0

ಸಂಬಂಧಿತ ಸುದ್ದಿ