ಬ್ರಹ್ಮಾವರ: ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. ಮಾಧುಸ್ವಾಮಿ ಅವರಿಗೆ ಶಾಸಕ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.
ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಉಂಟುಮಾಡುವ ಉಪ್ಪು ನೀರನ್ನು ತಡೆದು ಶುದ್ಧ ಕುಡಿಯುವ ನೀರು ಹಾಗೂ ಕೃಷಿಗೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಅವರ ಮನವಿಯ ಮೇರೆಗೆ ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರವನ್ನು ಹಾದು ಹೋಗುವ ಸೀತಾನದಿಗೆ ಬ್ರಹ್ಮಾವರ ತಾಲೂಕಿನ ಹಂದಾಡಿ - ಕುಮ್ರಗೋಡುವಿನಿಂದ ಬಾರ್ಕೂರು - ಬೆಣ್ಣೆಕುದ್ರು ಮಧ್ಯದಲ್ಲಿ ಸೀತಾ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರೂ. 160.25 ಕೋಟಿ ಹಾಗೂ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ - ಮೂಡಹಡು ಮತ್ತು ಬಾರ್ಕೂರು - ಬೆಣ್ಣೆಕುದ್ರು ಮಧ್ಯದಲ್ಲಿ ಸೀತಾನದಿಗೆ ಅಡ್ಡಲಾಗಿ ಸೇತುವೆ ಸಹಿತ ಉಪ್ಪುನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ರೂ. 151.00 ಕೋಟಿ ಮೊತ್ತಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
Kshetra Samachara
15/09/2022 11:56 am