ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು ನಗರದ ರಸ್ತೆಗಳಲ್ಲಿ ಗುಂಡಿ, ಆಮ್ ಆದ್ಮಿ ಪಕ್ಷದಿಂದ ಗುಂಡಿ ಅಭಿಯಾನಕ್ಕೆ ಸಿದ್ಧತೆ

ಪುತ್ತೂರು : ಪುತ್ತೂರು ನಗರ ಸಭೆಯಾದ್ಯಂತ ಇರುವ ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿದ್ದು, ಈ ಹಿನ್ನಲೆಯಲ್ಲಿ ಗುಂಡಿ ಅಭಿಯಾನವನ್ನು ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ತಿಳಿಸಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ನಗರ ಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳು ಕೆಟ್ಟು ಹೋಗಿದ್ದು, ನಗರ ಸಭೆ ಈ ರಸ್ತೆಯನ್ನು ದುರಸ್ತಿ ಮಾಡುವ ಕೆಲಸವನ್ನು ಮಾಡುತ್ತಿಲ್ಲ. ಈ ಹಿಂದೆ ಪುತ್ತೂರು ಎಪಿಎಂಸಿ ಸಂಪರ್ಕಿಸುವ ರಸ್ತೆಯಲ್ಲಿರುವ ಹೊಂಡಗಳನ್ನು ಮುಚ್ಚುವಂತೆ ಆಮ್ ಆದ್ಮಿ ಪಕ್ಷ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿತ್ತು. ಈ ವಿಚಾರವನ್ನು ಅರಿತ ನಗರಸಭೆ ಅಧಿಕಾರಿಗಳು ತರಾತುರಿಯಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರು.

ಗುಂಡಿಗಳ ತುಂಬಾ ಮಳೆ ನೀರು ಶೇಖರಣೆಗೊಂಡಿದ್ದರೂ, ಅಮಾ ನೀರನ್ನು ತೆಗೆಯದೆ ಅದರ ಮೇಲೆಯೇ ಜಲ್ಲಿಕಲ್ಲುಗಳನ್ನು ಹಾಕಿ ಮುಚ್ಚಲು ಪ್ರಯತ್ನಿಸಿದ್ದರು. ಈ ಅವೈಜ್ಞಾನಿಕ ಕಾಮಗಾರಿಯನ್ನು ಆಮ್ ಆದ್ಮಿ ಪಕ್ಷ ವಿರೋಧಿಸಿ ಸರಿಯಾಗಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿತ್ತು. ಆದರೆ ಈ ವಿಚಾರದಲ್ಲಿ ನಗರಸಭೆ ಆಡಳಿತ ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದ್ದು, ಆಮ್ ಆದ್ಮಿ ಪಕ್ಷ ರಸ್ತೆ ದುರಸ್ತಿಗೂ ಬಿಡುತ್ತಿಲ್ಲ ಎನ್ನುವ ಸುಳ್ಳು ಆಪಾದನೆಗಳನ್ನು ಜನತೆಯ ಮುಂದಿಡುತ್ತಿದೆ ಎಂದು ಅವರು ಆರೋಪಿಸಿದರು‌.

ಮುಂದಿನ ದಿನಗಳಲ್ಲಿ ಪುತ್ತೂರು ನಗರದ ರಸ್ತೆಯಲ್ಲಿರುವ ಗುಂಡಿಗಳ ಬಗ್ಗೆ ಗುಂಡಿ ಅಭಿಯಾನ ಮಾಡಲಿದ್ದು, ಸಾರ್ವಜನಿಕರು ತಮ್ಮ ತಮ್ಮ ವಾರ್ಡ್ ನಲ್ಲಿರುವ ರಸ್ತೆಗಳ ಗುಡಿಯ ಫೋಟೊ ತೆಗೆದು ಸ್ಥಳೀಯ ಜನಪ್ರತಿನಿಧಿಗಳಿಗೆ ಕಳುಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಕೂಡಾ ಇಂತಹ ಫೋಟೋಗಳನ್ನು ತೆಗೆದು ಅಧಿಕಾರಿಗಳ ಹಾಗು ಜನಪ್ರತಿನಿಧಿಗಳ ಕಳುಹಿಸುವ ಕೆಲಸವನ್ನೂ ಮಾಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

15/09/2022 12:23 pm

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ