ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಫಲಿಸಿದ ಉರುಳುಸೇವೆ ಪ್ರತಿಭಟನೆ; ಇಂದ್ರಾಳಿ ಜಂಕ್ಷನ್ ರಸ್ತೆ ರಿಪೇರಿಗೆ ಮುಹೂರ್ತ ನಿಗದಿ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಅಕ್ಟೋಬರ್ 1ರಿಂದ ಪ್ರಾರಂಭಿಸಿ ಒಂದು ತಿಂಗಳ ಒಳಗೆ ಪೂರ್ಣ ಪ್ರಮಾಣದಲ್ಲಿ ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಖಡಕ್ ಆದೇಶ ನೀಡಿದ್ದಾರೆ. ಉಡುಪಿ- ಮಣಿಪಾಲ ಮಧ್ಯೆ ಬರುವ ಇಂದ್ರಾಳಿ ಜಂಕ್ಷನ್ ಬಹುತೇಕ ಹದಗೆಟ್ಟಿದ್ದು, ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಎರಡು ದಿನಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ರಸ್ತೆ ರಿಪೇರಿ ಮಾಡುವಂತೆ ಆಗ್ರಹಿಸಿ ಹೆದ್ದಾರಿಯಲ್ಲೇ ಉರುಳು ಸೇವೆ ಮಾಡಿದ್ದರು. ಮರುದಿನವೇ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಅಕ್ಟೋಬರ್ ಒಂದಕ್ಕೆ ದುರಸ್ತಿ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜಸೇವಕ ನಿತ್ಯಾನಂದ ಒಳಕಾಡು, ಪಬ್ಲಿಕ್ ನೆಕ್ಸ್ಟ್ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹಲವು ವಾಹನ ಸವಾರರ ಸಾವಿಗೆ ಕಾರಣವಾದ ಈ ಮೃತ್ಯುಗುಂಡಿ ರಸ್ತೆಗೆ ಮುಕ್ತಿ ನೀಡಬೇಕು. ಶೀಘ್ರ ದುರಸ್ತಿ‌ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

Edited By : Shivu K
Kshetra Samachara

Kshetra Samachara

15/09/2022 01:53 pm

Cinque Terre

7.01 K

Cinque Terre

3