ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಬಸ್ಸು ನಿಲ್ದಾಣದ ಬಳಿಯ ಹೋಟೆಲ್ ತ್ಯಾಜ್ಯ ನೀರು ತೆರೆದ ಸ್ಥಳದಲ್ಲಿ ಹರಿಯುತ್ತಿದ್ದು, ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ರೋಗಗಳ ಭೀತಿ ಎದುರಾಗಿದೆ ಎಂದು ಸ್ಥಳೀಯ ಆಟೋ ಚಾಲಕರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ದೂರಿಗೆ ತಕ್ಷಣ ಸ್ಪಂದಿಸಿದ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಸೂಚನೆ ಮೇರೆಗೆ ಸ್ಥಳಕ್ಕೆ ನ ಪಂ. ಆರೋಗ್ಯಾಧಿಕಾರಿ ಲಿಲ್ಲಿ ನಾಯರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಸ್ಥಳಕ್ಕೆ ಹೋಟೆಲ್ ಮಾಲಕ ಹರೀಶ್ ಎಂಬವರನ್ನು ಕರೆಯಿಸಿ ಕೂಡಲೇ ತ್ಯಾಜ್ಯ ನೀರಿಗೆ ವ್ಯವಸ್ಥೆ ಕಲ್ಪಿಸಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ನಗರ ಪಂಚಾಯತಿ ಸಿಬ್ಬಂದಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/09/2022 08:39 pm