ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹೆದ್ದಾರಿಯ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಮಂಜೂರು: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಎನಿಸಿದ ರಾಷ್ಟ್ರೀಯ ಹೆದ್ದಾರಿ 169A ಇದರ ನೆಮ್ಮಾರ್ ಬ್ರಿಡ್ಜ್ ನಿಂದ ತನಿಕೋಡು ಚೆಕ್ ಪೋಸ್ಟ್ ನಡುವಿನ 8.8 ಕಿ ಮೀ ಉದ್ದದ ಭಾಗಕ್ಕೆ ಅಗಲೀಕರಣ ಸಹಿತ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ 94.1 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದೆ.

ಪ್ರಸ್ತಾವಿತ ನೆಮ್ಮಾರ್ ಬ್ರಿಡ್ಜ್ ನಿಂದ ತನಿಕೋಡು ಚೆಕ್ ಪೋಸ್ಟ್ ನಡುವಿನ 8.8 ಕಿ ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಭಾಗವನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವಂತಹ ಬೇಡಿಕೆ ಬಹಳ ದಿನಗಳಿಂದ ಇದ್ದು, ಇದೀಗ ಸಮಗ್ರ ರಾಷ್ಟ್ರೀಯ ಹೆದ್ದಾರಿ 169A ಅಭಿವೃದ್ಧಿ ಹೊಂದುತ್ತಿರುವ ಈ ಸಂದರ್ಭದಲ್ಲಿ ಈ ಬಹುಮುಖ್ಯ ಭಾಗವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ಷೇತ್ರದ ವಿನಂತಿಯನ್ನು ಮನ್ನಿಸಿ ರೂಪಾಯಿ 94.1 ಕೋಟಿ ಮೊತ್ತದ ಅನುದಾನವನ್ನು ಮಂಜೂರು ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಮತ್ತು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೀ ಅವರಿಗೆ ಹೃತ್ಪೂರ್ವಕ ಕೃತ್ಞತೆಗಳನ್ನು ಸಲ್ಲಿಸುತ್ತಿದ್ದೇನೆ.

ಈ ಅನುದಾನ ಮಂಜೂರಾತಿ ಆದೇಶದಲ್ಲಿ ತಿಳಿಸಿರುವಂತೆ ಪ್ರಸ್ತಾವಿತ ಕಾಮಗಾರಿಯು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಜನತೆಯ ಉಪಯೋಗಕ್ಕೆ ಲಭ್ಯಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸದರಿ ಕಾಮಗಾರಿ ಶೀಘ್ರವಾಗಿ ಅಚ್ಚುಕಟ್ಟಾಗಿ ಮತ್ತು ಉತ್ತಮ ಗುಣಮಟ್ಟದೊಂದಿಗೆ ಕೈಗೊಳ್ಳಲು ಎಲ್ಲಾ ಕಾಳಜಿ ವಹಿಸಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/09/2022 08:58 pm

Cinque Terre

3.99 K

Cinque Terre

3

ಸಂಬಂಧಿತ ಸುದ್ದಿ