ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹದಗೆಟ್ಟ ರಸ್ತೆ: ನಾಳೆ (ಸೆ. 27) ಪ್ರತಿಭಟನಾ ಮೆರವಣಿಗೆ

ಉಡುಪಿ: ನಗರ ಭಾಗದ ಹೆಚ್ಚಿನ ರಸ್ತೆಗಳು ಹಾಗೂ ಮಲ್ಪೆ‌ಯಿಂದ ಪರ್ಕಳದ ವರೆಗಿನ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳಿಗೆ ನಡೆದಾಡಲು ಕೂಡ ಅಸಾಧ್ಯವಾಗಿದೆ. ಸಾರ್ವಜನಿಕರು ಅನುಭವಿಸುತ್ತಿರುವ ಕಷ್ಟವನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ವಿನೂತನ ರೀತಿಯಲ್ಲಿ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯು ತಾ. 27.9.2022ರ ಮಂಗಳವಾರದಂದು ಸಂಜೆ 3.30 ಘಂಟೆಗೆ ಸರಿಯಾಗಿ ಕಲ್ಮಾಡಿ ಜಂಕ್ಷನ್‌ನಿಂದ(ಕಲ್ಮಾಡಿ ಚರ್ಚ್‌ನ ಬಳಿಯಿಂದ) ಪಾದಯಾತ್ರೆಯು ಹೊರಟು ಕರಾವಳಿ ಬೈಪಾಸ್ ಬಳಿ ಪ್ರತಿಭಟನೆಯು ಅಂತ್ಯವಾಗುವುದು.

ಈ ಬೃಹತ್ ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರು, ನಗರಸಭಾ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಪಕ್ಷದ ಹಿರಿಯ, ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು ಸಾರ್ವಜನಿಕರಾದ ತಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ ಎಂದು ನಗರಸಭೆ ಸದಸ್ಯ ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

26/09/2022 03:30 pm

Cinque Terre

6.77 K

Cinque Terre

0

ಸಂಬಂಧಿತ ಸುದ್ದಿ