ಮುಲ್ಕಿ ತಾಲೂಕು ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಕೆಲವು ದಿನಗಳಿಂದ ಸರ್ವರ್ ವ್ಯತ್ಯಯ ಉಂಟಾಗುತ್ತಿದೆ. ಇದರಿಂದ ಗ್ರಾಹಕರು ಪಡಿತರ ಸಾಮಗ್ರಿಗಳಿಗೆ ಅಂಗಡಿಯ ಎದುರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ.
ಕಳೆದ ಕೆಲವು ದಿನಗಳಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಎಸ್ಎನ್ಎಲ್ ಸಹಿತ ಅನೇಕ ಕಂಪನಿಗಳ ಸಿಗ್ನಲ್ ನಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಗ್ರಾಹಕರ ಬೆರಳಚ್ಚು ಪರೀಕ್ಷೆಗೆ ತೀವ್ರ ತೊಂದರೆಯಾಗಿದೆ. ಕೆಲ ಗ್ರಾಹಕರು, ವೃದ್ಧರು ಆಟೋ ಮೂಲಕ ಪಡಿತರ ನ್ಯಾಯ ಬೆಲೆ ಅಂಗಡಿಗೆ ಬರುತ್ತಿದ್ದು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ವ್ಯತ್ಯಯದಿಂದ ಆಟೋ ಬಾಡಿಗೆ ಪಾವತಿಸಿ ಖಾಲಿ ಕೈಯಲ್ಲಿ ಹಿಂದಿರುಗುತ್ತಿದ್ದು ಸಂಬಂಧಪಟ್ಟವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತರಲಾಗಿದ್ದು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
27/09/2022 10:02 pm