ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತಿಗೆ ವ್ಯಾಪ್ತಿಯ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಿಟೀಕರಣ ರಸ್ತೆ ಲೋಕಾರ್ಪಣೆ

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 50ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಡುಬೆಟ್ಟು ಪೆಲತ್ತಡ್ಕ ಮತ್ತು ಕಾಯರ್ ಬೆಟ್ಟು ರಸ್ತೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ಶನಿವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಪುತ್ತಿಗೆ ಗ್ರಾಮ ಪಂಚಾಯತ್ ಗೆ ಒಳಪಟ್ಟಂತಹ ರಸ್ತೆಗೆ ಕಾಂಕ್ರಿಟೀಕರಣ ರಸ್ತೆಯನ್ನಾಗಿ ಮಾಡಿ ಲೋಕಾರ್ಪಣೆಗೊಳಿಸಲಾಗಿದ್ದು, ಈ ಭಾಗದ ಜನರ ಬಹುವರ್ಷದ ಕನಸನ್ನು ನನಸುಗೊಳಿಸಲಾಗಿದೆ ಎಂದು ಹೇಳಿದರು.

ಅದಲ್ಲದೇ ಇನ್ನೂ ಮುಂದಿನ ಕೆಲವೇ ದಿನಗಳಲ್ಲಿ ೪೬ ಕೋಟಿ ವೆಚ್ಚದಲ್ಲಿ ಟೆಂಡರು ಮಾಡಲಾಗಿದ್ದು, ಕ್ಷೇತ್ರದ ಎಲ್ಲಾ ಒಳರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಒಟ್ಟು ಅನುದಾನಗಳಲ್ಲಿ ಅಭಿವೃದ್ಧಿ ಕೆಲಸದಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

01/10/2022 05:20 pm

Cinque Terre

2.14 K

Cinque Terre

0