ಕಾರ್ಕಳ: ರಾಜ್ಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ನಿಟ್ಟಿನಲ್ಲಿ ಗಮನಾರ್ಹ ಸಾಧನೆ ತೋರಲಾಗಿದೆ. ಆದ್ದರಿಂದ ಇನ್ನು ಮುಂದೆ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸಿದಲ್ಲಿ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಕಳದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ವಾರದ ನಿರ್ದಿಷ್ಟ ದಿನದಂದು ನಿರ್ವಹಣೆ (ಮರಗಳ ಗೆಲ್ಲು ಕಡಿಯುವುದು, ತಂತಿ ಬದಲಾವಣೆ ಇತ್ಯಾದಿ) ಕಾರಣಕ್ಕೆ ವಿದ್ಯುತ್ ಕಡಿತ ಮಾಡುವ ಪರಿಪಾಠವಿದ್ದು, ಇನ್ನು ಅದಕ್ಕೆ ತಿದ್ದುಪಡಿ ಮಾಡಿ ಆದೇಶವನ್ನು ಶೀಘ್ರ ಹೊರಡಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದರು.
ಹಳೆಯ ವಿದ್ಯುತ್ ಪರಿತರ್ವಕ ದುರಸ್ತಿ, ಬದಲಾವಣೆ, ಹೊಸ ಫೀಡರುಗಳ ಜೋಡಣೆ ಮೂಲಕ ವಿದ್ಯುತ್ ಪೂರೈಕೆಯಲ್ಲಿ ಗಮನಾರ್ಹ ಸಾಧನೆ ತೋರಲಾಗಿದೆ. ವಿವಿಧ ಯೋಜನೆಗಳ ಮೂಲಕ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಿದ್ದೇವೆ. ರಾಜ್ಯದೆಲ್ಲೆಡೆ ತಡೆರಹಿತ ವಿದ್ಯುತ್ ಪೂರೈಕೆಗೆ ಪ್ರಯತ್ನಿಸುತ್ತಿದ್ದೇವೆ ಎಂದರು.
Kshetra Samachara
04/10/2022 04:57 pm