ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಅವರಾಲುಮಟ್ಟು ರಸ್ತೆ ಅವ್ಯವಸ್ಥೆ: ಕುಸಿತದ ಭೀತಿಯಲ್ಲಿ ಕಿರು ಸೇತುವೆ

ಮುಲ್ಕಿ: ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸಂಪರ್ಕ ಕಲ್ಪಿಸುವ ಅವರಾಲು ಮಟ್ಟು ಪ್ರಧಾನ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ.

ಶಾಂಭವಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದ ರಸ್ತೆ ತೀವ್ರ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಅವರಾಲು ಮಟ್ಟು ರಸ್ತೆಯ ಶಾಂಭವಿ ನದಿ ತೀರದ ಬಳಿ ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ ಉಂಟಾಗಿದ್ದು ಸಮೀಪದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಮೋರಿ ಅಪಾಯದ ಸ್ಥಿತಿಯಲ್ಲಿದೆ.

ಅವರಾಲು ಮಟ್ಟು ರಸ್ತೆ ಮುಲ್ಕಿ ಪಟ್ಟಣ, ಪಲಿಮಾರು, ನಂದಿಕೂರು ಗ್ರಾಮಗಳಿಗೆ ಪ್ರಧಾನ ಕೊಂಡಿಯಾಗಿದ್ದು ರಸ್ತೆ ಅವ್ಯವಸ್ಥೆಯಿಂದ ಸ್ಥಳೀಯ ಗ್ರಾಮಸ್ಥರು ಸಂಬಂಧಪಟ್ಟವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಎಗ್ಗಿಲ್ಲದೆ ನಡೆಯುತ್ತಿರುವ ಮರಳುಗಾರಿಕೆಯಿಂದ ರಸ್ತೆ ಸಂಪೂರ್ಣ ನಾಶವಾಗಿದ್ದು ಕೂಡಲೇ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Edited By :
Kshetra Samachara

Kshetra Samachara

08/10/2022 02:36 pm

Cinque Terre

6.17 K

Cinque Terre

0

ಸಂಬಂಧಿತ ಸುದ್ದಿ