ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ : ಜನಜಾಗೃತಿ ಸಮಾವೇಶ ಯಶಸ್ವಿ

ಬ್ರಹ್ಮಾವರ : ಶ್ರೀಕ್ಷೇತ್ರ ಧರ್ಮಸ್ಥಳದ ಡಾ,ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಯೋಜನೆಗಳು ಸರಕಾರಕ್ಕೆ ಮಾದರಿಯಾಗಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಹಾಗೂ ಬ್ರಹ್ಮಾವರ ತಾಲೂಕು ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಜನಜಾಗೃತಿ ಸಮಾವೇಶ ಭಾನುವಾರ ಬ್ರಹ್ಮಾವರ ಬಂಟರ ಭವನದಲ್ಲಿ ಜರುಗಿತು.

ಸಮಾರಂಭ ಉದ್ಘಾಟಿಸಿದ ಉಡುಪಿ ಶಾಸಕ ಕೆ. ರಘುಪತಿ ಭಟ್ ಮಾತನಾಡಿ ಮಧ್ಯಪಾನ ನಿಷೇದವನ್ನು ಸರಕಾರ ಮಾಡಲು ಅಸಾದ್ಯವಾದುದನ್ನು ಖಾವಂದರು ಜನರಲ್ಲಿ ಅರಿವನ್ನು ಮೂಡಿಸಿ ನಿರ್ಮೂಲನೆ ಮಾಡುವ ಜನಜಾಗೃತಿ ರಾಷ್ಟ್ರಕ್ಕೆ ಮಾದರಿ ಎಂದರು.

ನವಜೀವನ ಸದಸ್ಯರನ್ನು ಗೌರವಿಸಲಾಯಿತು.

ಬ್ರಹ್ಮಾವರ ತಾಲೂಕು ಅಧ್ಯಕ್ಷ ಅಚ್ಯುತ ಪೂಜಾರಿ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ದಿನೇಶ್ ಶೇರಿಗಾರ್ , ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ , ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

Edited By : Somashekar
Kshetra Samachara

Kshetra Samachara

10/10/2022 02:22 pm

Cinque Terre

7.09 K

Cinque Terre

0

ಸಂಬಂಧಿತ ಸುದ್ದಿ